ದಕ್ಷಿಣಕನ್ನಡ : ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳಿಗೆ ಹೊಸ ರೂಲ್ಸ್ ಜಾರಿಯಾಗಿದ್ದು, ಫೆ. 20ರೊಳಗೆ ರಿಕ್ಷಾ ಗಳ ಬಣ್ಣ ಬದಲಾಯಿಸಲು ಸೂಚನೆ ನೀಡಲಾಗಿದೆ.
ಎಲ್ಲ ವಿಧದ ಆಟೋ ರಿಕ್ಷಾಗಳಿಗೆ (ಇ-ಆಟೋ ರಿಕ್ಷಾಗಳು ಒಳಗೊಂಡಂತೆ) ಮೆಥನಾಲ್ ಮತ್ತು ಇಥನಾಲ್ ಇಂಧನ ಬಳಸಿ ಸಂಚರಿಸುವ ಆಟೋರಿಕ್ಷಾ ಒಳಗೊಂಡಂತೆ ಆಟೋ ರಿಕ್ಷಾದ ಮಧ್ಯ ಭಾಗ ದಿಂದ ಕೆಳಗಡೆ ಕಪ್ಪು ಬಣ್ಣವನ್ನು ಪೂರ್ತಿಯಾಗಿ ಬಳಿಯಬೇಕು.
ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ.
ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್/ಗುರುತಿನ ಸಂಖ್ಯೆಯನ್ನು ಪೊಲೀಸ್ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ ಎಂದು ಎಲ್ಲಾ ಆಟೋ ಚಾಲಕರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.