ಹನ್ನೊಂದು ವರ್ಷದ ಬಾಲಕನೊಬ್ಬ ತನ್ನ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಲಕ್ಕಾಡ್‌ನಲ್ಲಿ ನಡೆದಿದೆ.
ಎಡತನಾಟುಕರ ಕೊಟಪಳ್ಳ ಶಾಲೆಯ 5ನೇ ತರಗತಿ ವಿದ್ಯಾರ್ಥಿ ರಿದಾನ್(11) ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶಾಲೆಯಿಂದ ಪ್ರವಾಸಕ್ಕೆ ತೆರಳಲಾಗದೆ ಖಿನ್ನತೆಗೆ ಒಳಗಾಗಿ ಮಗು ಇಂತಹ ಕೃತ್ಯಕ್ಕೆ ಬಲಿಯಾಗಿದ್ದಾನೆ. ಬೆಳಗ್ಗೆ ಮನೆಯೊಳಗೆ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶಾಲೆಯಿಂದ ವಯನಾಡಿಗೆ ಪ್ರವಾಸ ಹೋಗುವುದೆಂದು ನಿರ್ಧರಿಸಲಾಯಿತು. ಪ್ರವಾಸದಲ್ಲಿ ಆಸಕ್ತಿ ಇದ್ದರೂ ಹಣ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಮನೆಯಲ್ಲಿ ಹೇಳಿದರು. ಹಣ ನೀಡದಿದ್ದಲ್ಲಿ ಪ್ರವಾಸಕ್ಕೆ ತೆರಳುವಂತಿಲ್ಲ ಎಂದು ಶಾಲಾ ಅಧಿಕಾರಿಗಳು ಸಹ ತಿಳಿಸಿದ್ದರು. ರಿದಾನ್ ತಂದೆ ವಿದೇಶದಲ್ಲಿದ್ದಾರೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.