ಹಾಸನ: ಎರಡು ಲಾರಿಗಳ ನಡುವೆ ಕಾರು ಸಿಲುಕಿ ಒಂದೇ ಕುಟುಂಬದ ಎಲ್ಲಾ 6 ಜನರೂ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪ ಇಂದು ಮುಂಜಾನೆ ನಡೆಯಿತು.
ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ (ಬಾಲಕ) ಹಾಗು ರಾಕೇಶ್ (ಚಾಲಕ) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕಂದಲಿ ಹೊಸಕೋಟೆ ತಾಲೂಕಿನವರಾದ ಇವರು, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಈಟಿಯೋಸ್ ಕಾರಿನಲ್ಲಿ ತೆರಳುತ್ತಿದ್ದರು. ಮಂಗಳೂರಿನಿಂದ ಹಿಂದಿರುಗುತ್ತಿದ್ದಾಗ ಅಪಘಾತ ಘಟಿಸಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ನಜ್ಜುಗುಜ್ಜಾದ ಕಾರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಟ್ಟರು.
ಸ್ಥಳಕ್ಕೆ ಹಾಸನ ಎಸ್ಪಿ ಮಹಮದ್ ಸುಚಿತಾ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.