ಉಡುಪಿ: ಶೌಚಾಲಯದಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರ ವಿರುದ್ಧ FIR

ಉಡುಪಿ : ಇಡೀ ದೇಶದಲ್ಲೇ ಸುದ್ದಿಯಾದ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಲ್ಪೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ತೆಗೆದು ವಾಟ್ಸಪ್ ಗುಂಪುಗಳಿಗೆ ಶೇರ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು, ಈ ವಿಚಾರವನ್ನು ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ವಿಡಿಯೋ ಡಿಲೀಟ್‌ ಮಾಡಿದ್ದಾರೆ ಎಂದು ಹೇಳಲಾಗಿದ್ದು ಇದೀಗ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಸುಮೋಟೋ ಕೇಸ್‌ ದಾಖಲಿಸಿಕೊಳ್ಳಲಾಗಿದೆ. ವೀಡಿಯೋ ಮಾಡಿದ ಮೂವರು ವಿದ್ಯಾರ್ಥಿಗಳಾದ ಅಲಿಮತುಲ್ ಶೈಫಾ, ಶಬಾನಾಜ್ ಮತ್ತು ಆಲಿಯಾ ವಿರುದ್ಧ ಹಾಗೂ ನೇತ್ರಜ್ಯೋತಿ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಸೆಕ್ಷನ್‌ 509, 204, 175,34, ಸೇರಿ ವಿವಿಧ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಬಿಜೆಪಿ ನಾಯಕರು, ಹಲವು ಹಿಂದೂ ಸಂಘಟನೆಗಳು, ಮಹಿಳೆಯರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ವಿಚಾರಣೆಯನ್ನು ಆರಂಭಿಸಲಿದ್ದಾರೆ.

Check Also

ಉಪ್ಪಿನಂಗಡಿ:  2 ಕಾರುಗಳಿಗೆ ಲಾರಿ ಢಿಕ್ಕಿ- ನಾಲ್ವರು ಗಂಭೀರ

ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ …

Leave a Reply

Your email address will not be published. Required fields are marked *

You cannot copy content of this page.