ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ, ಕೇಂದ್ರ ಸರ್ಕಾರ, ನವದೆಹಲಿ ಇವರಿಂದ ನೀಡಲಾಗುವ PRADAN MANTRI UCHATAR SHIKSHA PROTSAHAN (PM-USP) YOJANA ಹೆಸರಿನಲ್ಲಿ ಪ್ರತೀ ವರ್ಷದಂತೆ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂಯೋಜನೆವಾರು 80% ಗಿಂತ ಹೆಚ್ಚು ಅಂಕ ಗಳಿಸಿದ ಹಾಗೂ ತಮ್ಮ ವಿದ್ಯಾಭ್ಯಾಸವನ್ನು ಕಡ್ಡಾಯವಾಗಿ ಉನ್ನತ ಶಿಕ್ಷಣದಲ್ಲಿ ಮುಂದುವರೆಸಿರು ವಂತಹ (ಕನಿಷ್ಠ 03 ವರ್ಷದ ಪದವಿ ತರಗತಿಗಳೂ ಸೇರಿದಂತೆ) 2nd Central Sector Scheme of Scholarship for Colleges and University Students ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಅಧಿಕೃತ ವೆಬ್‌ಸೈಟ್: www.scholarship.gov.in 3 National e-Scholarship Portal Online : 2024- 25 ನೇ ಸಾಲಿನ Fresh Batch ಹಾಗೂ ಎಲ್ಲಾ ಹಂತದRenewals ಗೆ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರಿಂದ ಅಕ್ಟೋಬರ್ 31ರ ವರೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೋಂದಣಿ ಸಂಖ್ಯೆಯನ್ನು ತಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿಕೊಳ್ಳತಕ್ಕದ್ದು. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳನ್ನು ಪರಿಶೀಲನೆಗಾಗಿ ತಾವು ಅಧ್ಯಯನ ಮಾಡುತ್ತಿರುವ ಪದವಿ ಕಾಲೇಜುಗಳಲ್ಲಿ ನೇಮಕವಾಗಿರುವ Institute Nodal Officer (INO) ಗಳಿಗೆ ನಿಗಧಿತ ದಿನಾಂಕದೊಳಗೆ ಕಡ್ಡಾಯವಾಗಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಆಯಾ ಕಾಲೇಜುಗಳ ಐಎನ್‌ಓ ಗಳು ಕೂಲಂಕುಷವಾಗಿ ಪರಿಶೀಲಿಸಿ, ಸದರಿ ವಿದ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ದಾಖಲಾಗಿ ವಿದ್ಯಾಭ್ಯಾಸ ಮುಂದುವರೆಸಿರುವ ಬಗ್ಗೆ ಹಾಗೂ ವಿದ್ಯಾರ್ಥಿಯು ಸಲ್ಲಿಸಿರುವ ವಿವರಗಳನ್ನು ಖಚಿತಪಡಿಸಿಕೊಂಡು ಆನ್‌ಲೈನ್ ಮೂಲಕವೇ ನಿಗಧಿತ ದಿನಾಂಕದೊಳಗೆ ಅರ್ಹ ಅರ್ಜಿಗಳನ್ನು ಪರಿಶೀಲಿಸುವುದು. ಮುಖ್ಯವಾಗಿ ಅರ್ಹ ವಿದ್ಯಾರ್ಥಿಯು ಒಂದಕ್ಕಿAತ ಹೆಚ್ಚು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ, ಯಾವುದಾದರೂ ಒಂದು ಅರ್ಜಿಯನ್ನು ಮಾತ್ರವೇ ಪರಿಶೀಲಿಸತಕ್ಕದ್ದು (ಎನ್.ಎಸ್.ಪಿ. ಅಥವಾ ಎಸ್.ಎಸ್.ಪಿ ವಿದ್ಯಾರ್ಥಿವೇತನಗಳಲ್ಲಿ ಯಾವುದಾದರೂ ಒಂದು ವಿದ್ಯಾರ್ಥಿವೇತನಕ್ಕೆ ಮಾತ್ರ ಅರ್ಹರಿರುತ್ತಾರೆ). ಯಾವುದೇ ಕಾರಣಕ್ಕೂ ನೈಜ ವಿದ್ಯಾರ್ಥಿಯ ಹೊರತು ಆಯ್ಕೆಯಾಗದ ವಿದ್ಯಾರ್ಥಿಗೆ ವಿದ್ಯಾರ್ಥಿವೇತನ ಜಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರಾಚಾರ್ಯರು/ಕಾಲೇಜುಗಳದ್ದಾಗಿರುತ್ತದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.