ಉಡುಪಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ – ಜಾಗರೂಕರಾಗಿರುವಂತೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ಮನವಿ

ಉಡುಪಿ: ಜಿಲ್ಲೆಯಲ್ಲಿ ಆನ್‌ಲೈನ್ ಫ್ರಾಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿ ಇರುವಂತೆ ಉಡುಪಿ ಎಸ್‌ಪಿ ಡಾ.ಅರುಣ್ ಮನವಿ ಮಾಡಿದ್ದಾರೆ. ಉಡುಪಿ ಎಸ್‌ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೈಬರ್ ಕ್ರೈಮ್ ಸಂಬಂಧ ಹಲವು ದೂರುಗಳು ಬಂದಿವೆ. ಆದುದರಿಂದ ಈ ಜಿಲ್ಲೆಯ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಬೇಕು. 99%ರಷ್ಟು ಆನ್‌ಲೈನ್‌ ವಂಚನೆ ಪ್ರಕರಣಗಳಲ್ಲಿ ವಂಚನೆಗೆ ಒಳಗಾಗುವವರೇ ಸ್ವಯಂ ಆಗಿ ಅಪರಿಚಿತ ಖಾತೆಗೆ ಹಣ ಹಾಕಿ ಮೋಸಕ್ಕೆ ಒಳಗಾಗುತ್ತಿದ್ದಾರೆ. ವಂಚನೆಗೆ ಒಳಗಾದ ಕೂಡಲೇ 1930ಗೆ ಕರೆ ಮಾಡಿದರೆ ತಮ್ಮಹಣವನ್ನು ವಾಪಾಸ್ಸು ಪಡೆಯಲು ಸಾಧ್ಯವಾಗುತ್ತದೆ. ಅಥವಾ ತಕ್ಷಣ ಸೈಬರ್ ಕ್ರೈಮ್ ಪೊಲೀಸರನ್ನು ಸಂಪರ್ಕ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Check Also

ಮಣಿಪಾಲ: ಕಾಲೇಜ್ ವಿದ್ಯಾರ್ಥಿ ಆತ್ಮಹತ್ಯೆ..!

ಉಡುಪಿ:  ಮಣಿಪಾಲದ ವಾಗ್ಷಾದಲ್ಲಿ ಮೂರನೇ ವರ್ಷ ಬಿಎ (ಕಲ್ನರಿ ಆರ್ಟ್ಸ್) ವಿದ್ಯಾರ್ಥಿಯಾಗಿರುವ ಬೆಂಗಳೂರಿನ ಹಿತೇಂದ್ರ (26)  ತಾನು ವಾಸವಾಗಿದ್ದ ಹಾಸ್ಟೆಲ್ …

Leave a Reply

Your email address will not be published. Required fields are marked *

You cannot copy content of this page.