ಬೆಂಗಳೂರು: ಇಂದು (ಅ.26) ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಬಳಿಕ ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಂತರ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ. ಮುರ್ಮು ಅವರು ಸುವರ್ಣ ಮಹೋತ್ಸವ ಆಚರಣೆಗೆ ಚಾಲನೆ ನೀಡಿ ಮಾತನಾಡಲಿದ್ದಾರೆ.