November 9, 2024
vehicle-1652368676

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ.

ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು ಶೇಕಡಾ 10 ರಿಂದ 12 ರಷ್ಟು ಹೆಚ್ಚು ವಾಯುಮಾಲಿನ್ಯ ಉಂಟು ಮಾಡುತ್ತಿರುವ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಈ ಯೋಜನೆಯ ಕಡತಕ್ಕೆ ಗುರವಾರದಂದು ಸಹಿ ಹಾಕಿದ್ದಾರೆ.

ರಾಜ್ಯಗಳಿಗೂ ಈ ಯೋಜನೆಯ ಮಾಹಿತಿಯನ್ನು ಕಳುಹಿಸಿಕೊಡಲಾಗಿದ್ದು, ಇದನ್ನು ತಮ್ಮ ತಮ್ಮ ರಾಜ್ಯಗಳಲ್ಲಿಯೂ ಅನುಷ್ಠಾನಗೊಳಿಸುವಂತೆ ಸಲಹೆ ನೀಡಲಾಗಿದೆ. ಅಲ್ಲದೆ 20 ವರ್ಷ ಪೂರೈಸಿದ ಖಾಸಗಿ ವಾಹನಗಳನ್ನು ಕಡ್ಡಾಯವಾಗಿ ಗುಜರಿಗೆ ಹಾಕುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದ್ದು, ಆದರೆ ಈ ಕುರಿತು ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ.

About The Author

Leave a Reply

Your email address will not be published. Required fields are marked *

You cannot copy content of this page.