ಬೆಳ್ತಂಗಡಿ: ರಸ್ತೆ ಅಪಘಾತವೊಂದರಲ್ಲಿ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ.
ಇಲ್ಲಿನ ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿ ಹರ್ಷಿತ್ (20) ಮೃತಪಟ್ಟ ದುರ್ದೈವಿ. ಕೊಡ್ಲಕ್ಕಿ ನಿವಾಸಿ ಹರೀಶ್ಚಂದ್ರ ಎಂಬವರ ಪುತ್ರ ಹರ್ಷಿತ್ ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ರಸ್ತೆಯ ಬಂಗೇರಕಟ್ಟೆ ಎಂಬಲ್ಲಿ ಆಟೋ ರಿಕ್ಷಾಕ್ಕೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಹರ್ಷಿತ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.