ಮಂಗಳೂರು; ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.
ನಿನ್ನೆ ರಾತ್ರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು.
ಮೂವರಲ್ಲಿ ಇಬ್ಬರು ಈ ಹಿಂದೆ ನಡೆದ ಹಲವು ಪ್ರಕರಣಗಳ ಆರೋಪಿಗಳು ಎಂದು ಹೇಳಿದ್ದಾರೆ.
ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.