December 22, 2024
WhatsApp Image 2022-12-26 at 10.50.01 AM

ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ;
ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗಾ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.