ನಳಿನ್‌ರ ಚುನಾವಣೆಗೆ ಟಿಪ್ಪು-ಸಾವರ್ಕರ್‌ ಚರ್ಚೆ ನಾನು ಒಪ್ಪಲ್ಲ: ಯಡಿಯೂರಪ್ಪ

ಬೆಂಗಳೂರು: 2023ರ ಕರ್ನಾಟಕ ಚುನಾವಣೆಯನ್ನು ಟಿಪ್ಪು-ಸಾವರ್ಕರ್ ಕದನ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿರೂಪಣೆಗೆ ಬಿಜೆಪಿಯ ಪ್ರಮುಖ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ndtv.com ನೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಪಕ್ಷದ ಧೋರಣೆಯು ಅಭಿವೃದ್ಧಿಯನ್ನು ಬಿಟ್ಟು ಟಿಪ್ಪು-ಸಾವರ್ಕರ್‌ನಂತಹ ವಿಷಯಗಳಿಗೆ ಬದಲಾಗುತ್ತಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, “ನಾನು ಅವರ (ನಳಿನ್)‌ ಹೇಳಿಕೆಯನ್ನು ಒಪ್ಪುವುದಿಲ್ಲ. ಆದರೆ ಪ್ರಮುಖ ವಿಷಯವೇನೆಂದರೆ ನಾವು ತುಂಬಾ ಶ್ರಮಪಡಬೇಕಾಗಿದೆ. ಬಿಜೆಪಿಯನ್ನು ಸೋಲಿಸಲು ಅತ್ತ ಕಾಂಗ್ರೆಸ್‌ ಕೂಡಾ ಶ್ರಮಿಸುತ್ತಿದೆ. ಮೋದಿ ಮತ್ತು ಅಮಿತ್‌ ಶಾ ಅವರ ಕಾರಣದಿಂದ ನಾನು ಬಹುಮತ ಪಡೆಯುವ ಕುರಿತು ತುಂಬಾ ಆತ್ಮವಿಶ್ವಾಸದಲ್ಲಿದ್ದೇನೆ. ಕಾಂಗ್ರೆಸ್‌ ಅಥವಾ ಜೆಡಿಎಸ್‌ ಕುರಿತು ನಾವು ತಲೆಕೆಡಿಸಿಕೊಂಡಿಲ್ಲ” ಎಂದು ಅವರು ಹೇಳಿದರು.

ಬಿಜೆಪಿಗೆ ಇನ್ನು ಯಾವ ನಿರೂಪಣೆಯು ಹೊಂದಿಕೊಳ್ಳಬಹುದು ಎಂದು ಪ್ರಶ್ನಿಸಿದಾಗ, ‘ಕಷ್ಟಪಟ್ಟು ಕೆಲಸ ಮಾಡು’ ಎಂಬ ಮಂತ್ರ ಬಿಜೆಪಿಗೆ ಕೆಲಸ ಮಾಡಲಿದೆ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಮಾಡಿರುವ ಉತ್ತಮ ಕಾರ್ಯಯೋಜನೆಗಳನ್ನು, ಅದರ ಸಂದೇಶಗಳನ್ನು ಮನೆ ಮನೆಗೆ ತಲುಪಿಸಬೇಕಾಗಿದೆ ಎಂದು ಅವರು ಹೇಳಿದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.