

ವೇಣೂರು: : ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷಾದ್ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿವೇಳೆ ನೌಷಾದ್ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಂದು ದ.ಕ. ಮತ್ತು ಕೊಡಗು ಜಿಲ್ಲೆಗಳಲ್ಲಿ ಅಧಿಕಾರಿಗಳು ದಾಳಿ ನಡಸಿ ಪರಿಶೀಲನೆ ನಡೆಸುತ್ತಿದ್ದಾರೆ.