ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ನಾಳೆಯೂ ಮಳೆಯ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದು, ಹವಾಮಾನ ಇಲಾಖೆಯಿಂದ ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿರೋದಾಗಿ ತಿಳಿಸಿದ್ದಾರೆ.
ಇಂದು ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಎರಡು ತಾಲೂಕುಗಳಿಗೆ ಭಾರೀ ಮಳೆಯ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಡಿಸಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.