ಉಡುಪಿ ವೀಡಿಯೋ ಪ್ರಕರಣ: ಪೊಲೀಸರ ಹೇಳಿಕೆ ಹೊರತಾಗಿ ಊಹಾಪೋಹಗಳಿಗೆ ಕಿವಿ ಕೊಡಬೇಡಿ: ಖುಷ್ಬೂ

ಇಂದು ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಚರ್ಚೆ ನಡೆಸಿ ಮಾಹಿತಿಗಳನ್ನು ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಈ ಪ್ರಕರಣಧಲ್ಲಿ ಈಗಲೇ ಏನೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ನೀವು ಬರಬೇಡಿ. ಸಾಕ್ಷ್ಯ ಸಿಕ್ಕಿದೆಯಾ ಎನ್ನುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದರು.

ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯ ಬೇಕು. ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಪ್ರಾಮಾಣಿಕವಾಗಿ ಕೋರುತ್ತೇನೆ. ಯಾವುದೇ ಗಾಳಿ ಸುದ್ದಿಗಳಿಗೆ , ವಾಟ್ಯಾಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ. ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ ಎಂದರು.

ಇನ್ನು ಈ ಘಟನೆಗೆ ಸಂಬಂಧಿಸಿ ಫೋನ್ಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ನಮಗೆ ನಮ್ಮ ಕೆಲಸ ಮಾಡಲು ಬಿಡಿ. ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ ಎಂದರು.

ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರ. ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ ಎಂದರು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ.

ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರವಾಗಿದೆ. ಇಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ. ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದರು.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.