December 22, 2024
WhatsApp Image 2024-07-27 at 3.56.28 PM

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ಗುಡ್ಡ ಏಕಾಏಕಿ ಕುಸಿತಗೊಂಡ ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿವೆ. ಮಾಹಿತಿ ತಿಳಿದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಣ್ಣು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜುಲೈ 18 ರಂದು ಸಕಲೇಶಪುರದ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬಳಿಕ ಜುಲೈ 19ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದಿತ್ತು.

ಆದರೆ, ಜಿಲ್ಲಾಡಳಿತವು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಹಿಂಪಡೆಯುವುದರೊಂದಿಗೆ ಕೆಲ ಷರತ್ತುಗಳಡಿ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು. ಅಂದರೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು.

 

About The Author

Leave a Reply

Your email address will not be published. Required fields are marked *

You cannot copy content of this page.