ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಪಲ್ಲವಿ(21) ಮೃತ ರ್ದುದೈವಿ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಪಲ್ಲವಿ ಅವರಿಗೆ ಜುಲೈ 9ರಂದು ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಹತ್ತಿರದ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಲವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಜ್ವರದ ತೀವ್ರತೆ ಹೆಚ್ಚಾದ ಹಿನ್ನಲೆ ಮೆಗ್ಗಾನ್ ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪಲ್ಲವಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿಯೇ ಯುವತಿ ಮೃತಪಟ್ಟಿದ್ದಾರೆ.
ಇತ್ತ ಮನೆ ಮಗಳನ್ನು ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು ಇದು ಶಿವಮೊಗ್ಗ ಜಿಲ್ಲೆಯ ಪ್ರಕರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಯಾವುದೇ ಇಲಿ ಜ್ವರ ಪ್ರಕರಣಗಳು ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.