ಬಂಟ್ವಾಳ: ಭಾರೀ ಮಳೆಗೆ ಗುಡ್ಡವೊಂದು ಕುಸಿದು ಮನೆ ಮೇಲೆ ಬಿದ್ದ ಘಟನೆ ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ. ಕುರುಂಬಳ ನಿವಾಸಿ ಕಲಂದರ್ ಅಲಿ ಎಂಬವರ ಮನೆ ಮೇಲೆ ನಿನ್ನೆ ರಾತ್ರಿ ಸುರಿದ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಮಕ್ಕಳು ಸಹಿತ ಏಳು ಮಂದಿ ಇದ್ದಿದ್ದರು. ಆದರೆ ಅವರೆಲ್ಲರೂ ಮನೆಯೊಳಗಡೆ ಇದ್ದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಮತ್ತಷ್ಟು ಗುಡ್ಡ ಕುಸಿಯುವ ಭೀತಿಯಿದ್ದು, ಮನೆಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …