ಶಕ್ತಿನಗರದ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು.

ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮ ಹಾಗೂ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು. ಸುಮಾರು ಒಂದೂವರೆ ಗಂಟೆಯ ಅವಧಿಯ ಸಮಯದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯಕ್ರಮವು ನಂತರ ಜರಗಿತು. ಕಾರ್ಯಕ್ರಮದ ವೇದಿಕೆಯಲ್ಲಿ ಹೆಚ್.ಕೆ.ಪುರುಷೋತ್ತಮ್, ಮಹೇಶ್.ಎಂ.ಆರ್ , ವಿಜಯ್ ಕೊಡಂಗೆ, ರವಿಚಂದ್ರ, ವನಿತಾ ಪ್ರಸಾದ್, ಜೀವನ್ ಆಚಾರ್ಯ, ಬಾಲಕೃಷ್ಣ, ಶಿವಪ್ಪರವರು ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ಎಲ್ಲಾ ಪ್ರಮುಖರು ಹಾಗೂ ಸರ್ವ ಕಾರ್ಯಕರ್ತರು, ಸ್ಪರ್ಧಾಳುಗಳ ಹೆತ್ತವರು, ಸ್ಥಳೀಯ ನಿವಾಸಿಗಳು ಈ ಸಂಧರ್ಭದಲ್ಲಿ ನೆರೆದಿದ್ದರು.

ಈ ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 150ಕ್ಕೂ ಮಿಕ್ಕಿದ ಸ್ಪರ್ಧಾಳುಗಳು ಭಾಗವಹಿಸದ್ದರು. ಹಾಗೆಯೇ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವತಿಯಿಂದ ಪ್ರತೀ ಆದಿತ್ಯವಾರ ನಡೆಯುವಂತಹ ಬಾಲ ಸಂಸ್ಕಾರದ ಮಕ್ಕಳಿಗೂ ವಿವಿಧ ವಿಭಾಗಗಳಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಒಟ್ಟು 13 ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಎಲ್ಲಾ ಸ್ಪರ್ಧಾಳುಗಳಿಗೆ ಪ್ರಶಂಸಾ ಪತ್ರವನ್ನೂ ಕೂಡಾ ನೀಡುವ ಕಾರ್ಯಕ್ರಮ ಜರಗಿತು.

Check Also

ಸುರತ್ಕಲ್: ಮನೆ ಮೇಲೆ ‌ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುರತ್ಕಲ್: ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ …

Leave a Reply

Your email address will not be published. Required fields are marked *

You cannot copy content of this page.