ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಟಾಪ್’ಇನ್ ಟೌನ್ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ವರದಿಯಾಗಿದೆ.
ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು ನಂತರ ಅಗ್ನಿ ಶಾಮಕ ದಳದ ಸಹಾಯ ಪಡೆದಿದ್ದಾರೆ.
ಬೆಂಕಿ ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆ ಮೂಲಕ ಭಾರೀ ದುರಂತವೊಂದು ತಪ್ಪಿದಂತಾಗಿದೆ.