ಬೆಳ್ತಂಗಡಿ: ವ್ಯಕ್ತಿಯೋರ್ವರು ಸಾಲಬಾಧೆ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಕೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕೆಂಗುಡೇಲು ನಿವಾಸಿ ಪೂವಣಿ ಗೌಡ (54) ಎಂದು ಗುರುತಿಸಲಾಗಿದೆ.
ಇವರು ನ. 24ರಂದು ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂವಣಿ ಗೌಡ ಅವರು ಸಾಲದ ಬಾಧೆಯಿಂದ ನೊಂದಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ, ಪುತ್ರ, ಮತ್ತು ಪುತ್ರಿಯನ್ನು ಅಗಲಿದ್ದಾರೆ.