ಕಾರ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಗಂಭೀರಗಾಯಗಳಾದ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಲೆಮಿನಾ ಕ್ರಾಸ್ ಬಳಿ ನಡೆದಿದೆ.
ಕಾರ್ಕಳದಿಂದ ಬೆಳ್ಳಣ್ ಕಡೆಗೆ ಹೋಗುತ್ತಿದ್ದ ಬಸ್ಸಿಗೆ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಗುದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.