ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ತಲೆಮರೆಸಿಕೊಂಡಿರಿವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ ಘೋಷಿಸಿದ್ದರು.
ಇದೀಗ ಇಬ್ಬರೂ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಗಳಿಬ್ಬರನ್ನೂ ಕರೆತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.