ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ನಾಳೆ ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ಬಿಜೆಪಿ ಪಕ್ಷದ ಕಚೇರಿಯಲ್ಲಿ ವರಿಷ್ಟರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಾಸ್ಕರ್ ರಾವ್ ಅವರು ಇಂದು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಗೆ ಕೂಡ ಭೇಟಿ ನೀಡಿ ಅಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಆಮ್ ಆದ್ಮಿ ಪಕ್ಷದಲ್ಲಿ ಭಾಸ್ಕರ್ ರಾವ್ ಸಕ್ರಿಯರಾಗಿದ್ದು, ಇದೀಗ ಬಿಜೆಪಿಯತ್ತ ವಾಲಿದ್ದಾರೆ..ಇತ್ತೀಚೆಗೆ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿ ಅವರನ್ನು ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿತ್ತು.