March 5, 2026
WhatsApp Image 2024-05-28 at 4.04.13 PM

ಬೆಂಗಳೂರು : ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಸಚಿವ ಜಮೀರ್ ಶಿಷ್ಯ ನವೀನ್ ಗೌಡ ಹಾಗೂ ಚೇತನ್‌ನನ್ನ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಗಳು ನಿರೀಕ್ಷಣಾ ಜಾಮೀನಿಗೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ರು. ಇಂದು ಮಧ್ಯಾಹ್ನ ಹೈ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಹಿನ್ನೆಲೆ ಕೋರ್ಟ್ ಬಳಿ ಬಂದಿದ್ದ ಆರೋಪಿಗಳನ್ನ ಎಸ್‌ಐಟಿ ಬಂಧಿಸಿದೆ.

ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಹಾಸನದ ಸೆನ್ ಠಾಣೆಯಲ್ಲಿ ನವೀನ್ ಗೌಡ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇಷ್ಟು ದಿನ ಆದರೂ ಅರೆಸ್ಟ್ ಆಗದೆ ಇರೋದಕ್ಕೆ ಸಾಕಷ್ಟು ಆಕ್ಷೇಪಗಳು ಬಂದಿದ್ವು.

ಎಚ್‌ಡಿಕೆ ಸೇರಿದಂತೆ ಹಲವು ನಾಯಕರು ಈ ಬಗ್ಗೆ ಪ್ರಶ್ನೆ ಮಾಡಿದ್ರು. ಇಂದು ಎಸ್‌ಐಟಿ ಅಧಿಕಾರಿಗಳು ಕೊನೆಗೂ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.