March 14, 2026
WhatsApp Image 2023-06-28 at 3.07.02 PM

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗಿದೆ.

ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಅನೌನ್ಸ್ ಮಾಡಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.