ಬೈಂದೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

ಬೈಂದೂರು: ತಾಲೂಕಿನ ಶಿರೂರು ಭಾಗದಲ್ಲಿ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು.ಸಮುದ್ರ ಪ್ರಕ್ಷುಬ್ಧ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ. ತಕ್ಷಣ ಇಲ್ಲಿನ ಸ್ಥಳೀಯ ಮೀನುಗಾರರು ಕಳೆಬರಹದ ಶೋಧಕ್ಕಾಗಿ ಪ್ರಯತ್ನಿಸಿದರೂ ಕೂಡ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ. ಬೈಂದೂರು ಠಾಣಾಧಿಕಾರಿ ನಿರಂಜನ ಗೌಡ, ಅಗ್ನಿಶಾಮಕ ದಳ, ಕರಾವಳಿ ಕಾವಲು ಪಡೆ, ತಹಶೀಲ್ದಾರರು ಹಾಗೂ ಸ್ಥಳೀಯ ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

Check Also

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ …

Leave a Reply

Your email address will not be published. Required fields are marked *

You cannot copy content of this page.