March 20, 2026
WhatsApp Image 2025-10-28 at 12.27.07 PM

ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.

ಹೌದು ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ.

ಧಾರವಾಡದ ಹೈಕೋರ್ಟ್ ಪೀಠದಲ್ಲಿ ಪುನಃಶ್ಚೇತನ ಸೇವಾ ಸಂಸ್ಥೆ ಹುಬ್ಬಳ್ಳಿಯ ಎನ್‌ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ವಿಧಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಸಂವಿಧಾನದ ಆರ್ಟಿಕಲ್ 91 ಎ ಪ್ರಕಾರ ಜನಗಳು ಸಭೆ ಸಮಾರಂಭಗಳಲ್ಲಿ ಜನ ಸೇರುವ ಹಕ್ಕಿದೆ ಆ ಹಕ್ಕನ್ನು ಉಲ್ಲಂಘನೆ ಮಾಡಲಾಗುತ್ತದೆ.

ಇದನ್ನು ನಿಯಂತ್ರಿಸಕ್ಕೆ ಸರ್ಕಾರ ಆದೇಶ ಮೂಲಕ ಮುಂದಾಗಿದ್ದು ಇದು ಸಂವಿಧಾನ ಬಾಹಿರ ಎಂದು ಅಶೋಕ್ ಹಾರನಹಳ್ಳಿ ವಾದ ಮಾಡಿದರು. ಹೈಕೋರ್ಟ್ ಕೂಡ ಈ ವಾದವನ್ನು ಒಪ್ಪಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಇದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು ಸಂವಿಧಾನ ಕೊಟ್ಟಿರುವ ಮೂಲಭೂತ ಹಕ್ಕನ್ನು ಸರ್ಕಾರದ ಒಂದು ಆದೇಶದ ಮೂಲಕ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರ ಏನು ಸಾಧಿಸಲು ಆದೇಶಕ್ಕೆ ಮಧ್ಯಂತರ ತಡೆ ನೀಡಿದರು. ಇನ್ನು ರಾಜ್ಯ ಸರ್ಕಾರದ ಪರ ವಕೀಲರು ವಾದ ಮಾಡಲು ಒಂದು ದಿನದ ಕಾಲಾವಕಾಶ ಕೇಳಿದ್ದು ಕೋರ್ಟ್ ನಿಮಗೆ ನೋಟಿಸ್ ನೀಡುತ್ತೆ ವಾದ ಮಾಡಿ ಎಂದು ಹೇಳಿ ಹೈಕೋರ್ಟ್ ಆದೇಶ ನೀಡಿತು.

About The Author

Leave a Reply

Your email address will not be published. Required fields are marked *

You cannot copy content of this page.