ಚಿಕ್ಕಮಗಳೂರು : ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಸೋಮವಾರ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅವಘಡದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.
ಅವಘಡದ ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಗಾಯಳುಗಳನ್ನು ಎನ್.ಆರ್ ಪುರ ಹಾಗೂ ಶಿವಮೊಗ್ಗದ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವವರಗಳನ್ನು ನಿರೀಕ್ಷಿಸಲಾಗುತ್ತಿದೆ.