ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಜಲ್ಲಿ ಲಾರಿಯೊಂದು ಹರಿದಿದೆ. ಅಪಘಾತಕ್ಕೊಳಗಾದ ಮೂವರಿಗೆ ಭಾರಿ ಪೆಟ್ಟಾಗಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ.
ಸಾಗರದ ಸಣ್ಣಮನೆ ಬಳಿ ನಡೆದ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ವಿದ್ಯಾರ್ಥಿನಿಯರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇವರಾಗಿದ್ದು, ಅಂಕಿತಾ, ಪ್ರತಿಮಾ, ಐಶ್ವರ್ಯ ಗಾಯಗೊಂಡವರಾಗಿದ್ದಾರೆ. ಇವರಲ್ಲಿ ಅಂಕಿತಾ ಅವರ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಅಂಕಿತಾರಿಗೆ ಮೊದಲು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.