ಚಾಮರಾಜನಗರ: ಪೊಲೀಸ್ ಕಾನ್ಸ್‌ಟೇಬಲ್ನಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದು ಮಹಿಳೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮುನಿಯಪ್ಪ ಎಂಬಾತ ಜಿಲ್ಲಾಸ್ಪತ್ರೆಗೆ ಸಂಬಂಧಿಕರನ್ನ ನೋಡಲು ಬಂದಿದ್ದ ಯುವತಿಯನ್ನ ಪೊಲೀಸ್ ವಸತಿ ಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ತಾನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ನಲ್ಲಿಯ ಮೇಲೆ ಬಿದ್ದು ಜನನೇಂದ್ರಿಯ ಗಾಯಗೊಂಡಿರುವುದಾಗಿ ಜಿಲ್ಲಾ ಸರ್ಜನ್ ಕೃಷ್ಣಪ್ರಸಾದ್ ಹೇಳಿದ್ದಾರೆ.ಇದುವರೆಗೂ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ದ ಮಹಿಳೆ ದೂರು ನೀಡಿಲ್ಲ. ಅಲ್ಲದೆ ಮಹಿಳೆ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದು, ಪೊಲೀಸ್ ಕಾನ್ಸ್‌ಟೇಬಲ್ ವಿರುದ್ದ ಸದ್ಯ ಯಾವುದೇ ಎಫ್ಐ ಆರ್ ಆಗಿಲ್ಲ.