

ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 25 ವರ್ಷಗಳ ಹಿಂದೆ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಹನೀಫ್ ಬಂಧಿತ ಆರೋಪಿ : 1999 ರಲ್ಲಿ ಜೈಲಿನಿಂದ ಬಿಡುಗಡೆ ಹೊಂದಿ ಸುಮಾರು 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈ ಪ್ರಕರಣದಲ್ಲಿ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಇಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ನೂತನ್ ಡಿ ಮತ್ತು ಸಿಬ್ಬಂದಿ ಹೆಚ್ ಸಿ ರಾಜು, ಹೆಚ್ ಸಿ ಅಶೋಕ್ ಶೆಟ್ಟಿಯವರ ತಂಡ ಆರೋಪಿಯನ್ನು ಕೇರಳದ ಕಾಸರಗೋಡಿನಿಂದ ಪತ್ತೆ ಹಚ್ಚಿ ನ್ಯಾಯಲಯದ ಮುಂದೆ ಹಾಜರು ಪಡಿಸಿದೆ.