ಮಂಗಳೂರು : ಬ್ರಿಜೇಶ್ ಚೌಟ ಒಟ್ಟು 70 ಲಕ್ಷ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.
ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ.ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ. ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.
ಇನ್ನು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ ರವರು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.