ಬಂಟ್ವಾಳ: ಯುವತಿಯ ವಿಡಿಯೋ ಚಿತ್ರೀಕರಣ ಪ್ರಕರಣ-ಆರೋಪಿ ಅರೆಸ್ಟ್

ಬಂಟ್ವಾಳ: ಯುವತಿಯೋರ್ವಳು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ‌ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ. ಯುವತಿ ಇದನ್ನು ಕಂಡು ಜೋರಾಗಿ ಬೊಬ್ಬೆ ಹಾಕಿದ್ದು, ಅಪರಿಚಿತ ಆರೋಪಿ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದ.ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ,ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.ಆದರೆ ಆತನ ಪತ್ತೆಯಾಗಿರಲಿಲ್ಲ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಘಟನೆ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೆ ಪೋಲೀಸರು ಕಾರ್ಯಚರಣೆ ಪ್ರಾರಂಭಿಸಿದ್ದರು. ಸಂಶಯದ ಮೇಲೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಈತ ಸತ್ಯ ಬಾಯಿಬಿಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ.ಈತನ ಈ ಕೆಟ್ಟ ಚಾಳಿಯ ಬಗ್ಗೆ ಪೋಲೀಸರು ತನಿಖೆ ನಡೆಸುತ್ತಿದ್ದು, ಈತನಿಂದ ಇಂತಹ ಕೃತ್ಯಗಳು ಬೇರೆ ಎಲ್ಲಿಯಾದರೂ ಆಗಿದೆಯಾ ಅನ್ನುವ ತನಿಖೆಗಳು ನಡೆಯುತ್ತಿದೆ ಎನ್ನಲಾಗಿದೆ. ಸದ್ಯ ಯಾವುದೇ ಸ್ಪಷ್ಟವಾದ ಮಾಹಿತಿ ತಿಳಿದು ಬಂದಿಲ್ಲ.ಪೋಲೀಸ್ ತನಿಖೆಯ ಬಳಿಕ ಈತನ ಸಂಪೂರ್ಣ ಮಾಹಿತಿ ನೀಡಲಿದ್ದೇವೆ‌

Check Also

ಡ್ರೋನ್ ಫಿಲ್ಮ್ ಮೇಕಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಉಡುಪಿಯ ರೋಹನ್ ಕೋಟ್ಯಾನ್

ಉಡುಪಿ:  ಕೌಶಲ್ಯಾಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯಯು ಮೇ 15 ರಿಂದ 19 ರ ವರೆಗೆ ದೆಹಲಿಯ ದ್ವಾರಕಾದಲ್ಲಿ ಆಯೋಜಿಸಿದ ರಾಷ್ಟ್ರದ …

Leave a Reply

Your email address will not be published. Required fields are marked *

You cannot copy content of this page.