ಮಂಗಳೂರು: ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್ ನಲ್ಲಿ ಡಿಸೆಂಬರ್ 1ರಿಂದ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಸುರತ್ಕಲ್ ಟೋಲ್ ಗೇಟ್ಅನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿಗಿದೆ. ಈ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಜಿಲ್ಲಾಧಿಕಾರಿ ಅವರು ನವೆಂಬರ್ 24ರಂದು ಹೊರಡಿಸಿರುವ ಆದೇಶ ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ಅದರಂತೆ ಡಿಸೆಂಬರ್ 1ರಿಂದ ಸುರತ್ಕಲ್ನಲ್ಲಿ ಟೋಲ್ ಸಂಗ್ರಹ ಇರುವುದಿಲ್ಲ ಎಂದು ಅಧಿಕೃತವಾಗಿ ತಿಳಿಸಲಾಗಿದೆ.