

ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಅವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರ ಸಮೀಪದ ಮಟಪಾಡಿಯಲ್ಲಿ ಲಕ್ಷ್ಮೀನಾರಾಯಣ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರು ಡಿ.19ರಂದು ಸೊಸೈಟಿಯ ಕಚೇರಿಗೆ ಘೇರಾವ್ ಹಾಕಿದ್ದು, ಗ್ರಾಹಕರಿಗೆ 100 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಸಹಕಾರಿ ಸಂಘವು ಗ್ರಾಹಕರಿಂದ 100 ಕೋಟಿಗೂ ಹೆಚ್ಚು ಠೇವಣಿ ಸಂಗ್ರಹಿಸಿ ವಿವಿಧೆಡೆ ಹೂಡಿಕೆ ಮಾಡಿದೆ ಎನ್ನಲಾಗಿದೆ.