ಗಮನಿಸಿ: ‘ಗೃಹಲಕ್ಷ್ಮಿ ಯೋಜನೆ ಸಮಸ್ಯೆ’ ಬಗೆಹರಿಸಿಕೊಳ್ಳಲು ‘ಯಾಜಮಾನಿ’ಯರೇ ಇಂದು ಕೊನೆ ದಿನ

ಗೃಹಲಕ್ಷ್ಮಿ ಯೋಜನೆ ( Gruha Lakshmi Scheme ) ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ( Grama Panchayat ) ವಿಶೇಷ ಶಿಬಿರ ಆಯೋಜಿಸಲಾಗಿದೆ ಇಂದು ಕೊನೆ ದಿನವಾಗಿದೆ ಕೂಡ.

 

ಪಂಚಾಯತ್‌ ರಾಜ್‍‌ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್‌ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್‌ ಡೆಲಿವರಿ ಆಫ್‌ ಸಿಟಿಜನ್‌ ಸರ್ವಿಸಸ್‌ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ. ‘ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆ ನಿವಾರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅದಾಲತ್‌ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ, ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಕಚೇರಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ:27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಈ ಕೆಳಕಂಡಂತ ಸೂಚನೆಗಳನ್ನು ನೀಡಲಾಗಿದೆ.

1. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸತಕ್ಕದ್ದು.
2. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸತಕ್ಕದ್ದು.
3. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು. 4. ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸತಕ್ಕದ್ದು.

5. ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸತಕ್ಕದ್ದು.
•ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು.
ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
ಇ-ಕೆವೈಸಿ ಅಪ್‌ಡೇಟ್ ಮಾಡುವುದು.
ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.
6. ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ದಿನಾಂಕ:22.12.2023 ರಂದು ಕ್ಯಾಂಪ್ ಆಯೋಜಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸುವುದು.
7. ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನಾಂಕ:27.12.2023 ರಿಂದ 29.12.2023 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.
8. ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು, 9. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.
10. ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡತಕ್ಕದ್ದು. ಮೇಲೆ ತಿಳಿಸಿದಂತೆ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ಗಳನ್ನು ಆಯೋಜಿಸಿ ಯಶಸ್ವಿಗೊಳಿಸಲು ಸೂಚಿಸಿದೆ.

ಗೃಹಲಕ್ಷ್ಮಿ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ. ಪಂಚಾಯತ್‌ ರಾಜ್‍‌ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್‌ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್‌ ಡೆಲಿವರಿ ಆಫ್‌ ಸಿಟಿಜನ್‌ ಸರ್ವಿಸಸ್‌ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ.

Check Also

ಉಪ್ಪಿನಂಗಡಿ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್- ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಬೆಂಕಿಗಾಹುತಿ

ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗಾಹುತಿಯಾದ …

Leave a Reply

Your email address will not be published. Required fields are marked *

You cannot copy content of this page.