
ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ. ಬುಧವಾರ ಬೆಳಗಿನ ಜಾವ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.