ಉಡುಪಿ : ಕುಂದಾಪುರ ತಾಲೂಕಿನ ಅಮಾಸೆಬೈಲು ಎಂಬಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಸಿವಿಲ್ ಕೋರ್ಟ್, ಜೆಎಂಎಫ್ ಸಿಯಲ್ಲಿ ಇಬ್ಬರ ಮಧ್ಯಾಂತರ ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಸೆಪ್ಟೆಂಬರ್ 13 ರಂದು ಮಾರಣಾಂತಿಕ ಹಲ್ಲೆಗೊಳಗಾದ ಮಗುವನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.ಪರೀಕ್ಷಿಸಿದ ವೈದ್ಯರು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳುಹಿಸಿದ್ದರು. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಹೇಶ ದೇವಾಡಿಗ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿದ ನಂತರ ಅಮಾಸೆಬೈಲು ಠಾಣೆಗೆ ದೂರು ನೀಡಿದ್ದಾರೆ.
ಮಗು ಚೇತರಿಸಿಕೊಂಡ ನಂತರ ತಾಯಿ ಮಗುವನ್ನು ವಿಚಾರಿಸಲಾಗಿದೆ. ಮಗು ಮಂಚದಿಂದ ಜಾರಿ ಬಿದ್ದು ಗಾಯಗೊಂಡಿದೆ ಎಂದು ತಾಯಿ ಹೇಳಿಕೆ ನೀಡಿದ್ದಾಳೆ. ಈ ಪ್ರಕರಣವನ್ನು ಮಕ್ಕಳ ರಕ್ಷಣಾ ಸಮಿತಿ ತೀವ್ರ ವಿಚಾರಣೆ ನಡೆಸಿ, ಹಲ್ಲೆ ಪ್ರಕರಣವನ್ನು ಬಯಲಿಗೆ ಎಳೆದಿದ್ದಾರೆ. ಅಕ್ಟೋಬರ್ 24ರಂದು ಜಾಮೀನು ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿಗಳಿಗೆ ಮಧ್ಯಾಂತರ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ಗಂಭೀರತೆಯನ್ನು ಮನಗಂಡ ಸಹಾಯಕ ಸರಕಾರಿ ಅಭಿಯೋಜಕ ಉದಯ್ ಕುಮಾರ್ ಜಾಮೀನು ರದ್ದು ಮಾಡಲು ಮನವಿ ಮಾಡಿಕೊಂಡಿದ್ದಾರೆ.