ಮುಡಿಪು: ಗೋಮಾಂಸದ ಖಾದ್ಯ ಇದೆ ಎಂದ ಹೊಟೇಲ್ ಮೇಲೆ ದಾಳಿ ಮಾಡಿರುವ ಘಟನೆ ಮುಡಿಪು ಎಂಬಲ್ಲಿ ನಡೆದಿದೆ.
ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಇದೆ ಎಂದು ಗ್ರಾಹಕರನ್ನು ಸೆಳೆಯಲು ಮಾಡಿದ ವಿಡಿಯೋದಲ್ಲಿ ಹೇಳಲಾಗಿದೆ ಎನ್ನಲಾಗಿದೆ. ಇದನ್ನು ನೋಡಿದ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ. ಪೊಲೀಸರ ಜೊತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹೊಟೇಲ್ ಗೆ ದಾಳಿ ಮಾಡಿ ದನದ ಮಾಂಸದ ಬಿರಿಯಾನಿ ಮತ್ತು ತಯಾರಿ ಮಾಡಿಟ್ಟಿದ್ದ ಮಾಂಸವನ್ನು ಪರಿಶೀಲಿಸಿದ್ದಾರೆ.ಈ ವೇಳೆ ಗೋಮಾಂಸದ ಖಾದ್ಯ ಪತ್ತೆಯಾಗಿದೆ ಎನ್ನಲಾಗಿದ್ದು,ಕೊಣಾಜೆ ಪೊಲೀಸರು ಹೋಟೆಲ್ ಮಾಲಕ ಹುಸೇನ್ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.