ಬೆಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ಕಾಂಡೋಮ್, ನೀರಿನ ಬಾಟಲಿಯಲ್ಲಿ ಮದ್ಯ ಪತ್ತೆ

ಬೆಂಗಳೂರು: ನಗರದ ಕೆಲವು ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ ನಲ್ಲಿ ವಸ್ತುಗಳನ್ನು ಕಂಡುಬಂದಿದ್ದು, ಸಿಬ್ಬಂದ್ದಿಗಳಿಗೆ ಶಾಕ್‌ ಆಗಿದೆ.

ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್​ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸೆಲ್​ಫೋನ್​ಗಳು, ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ ವಾಸನೆ ಹೊಂದಿರುವ ವೈಟ್​ನರ್​ಗಳು ಮತ್ತು ಹೆಚ್ಚಿನ ಮೊತ್ತದ ನಗದು ಪತ್ತೆಯಾಗಿವೆ.

ಈ ಬೆಳವಣಿಗೆಯು ಹಲವು ಶಾಲೆಗಳ ಬೋಧಕ ಸಿಬ್ಬಂದಿಯಲ್ಲಿ ಆಘಾತ ಉಂಟು ಮಾಡಿದೆ. ‘ಮಕ್ಕಳು ದಾರಿ ತಪ್ಪುತ್ತಿದ್ದಾರೆಯೇ? ಇಂಥ ಮಕ್ಕಳನ್ನು ನಿಭಾಯಿಸುವುದು ಹೇಗೆ’ ಎಂಬ ಗೊಂದಲ ಅವರನ್ನು ಕಾಡುತ್ತಿದೆ. ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ವ್ಯವಸ್ಥಾಪಕ ಮಂಡಳಿಯು ಸಹ ಮಕ್ಕಳ ಬ್ಯಾಗ್​ಗಳನ್ನು ತಪಾಸಣೆಗೆ ಒಳಪಡಿಸುವಂತೆ ಎಲ್ಲ ಶಾಲೆಗಳಿಗೆ ಸಲಹೆ ಮಾಡಿದೆ.

Check Also

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು- 144 ಸೆಕ್ಷನ್‌ ಜಾರಿ..!

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು …

Leave a Reply

Your email address will not be published. Required fields are marked *

You cannot copy content of this page.