January 16, 2025
yak1669774910

ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88) ಅವರು ಬುಧವಾರ ನಿಧನರಾಗಿದ್ದಾರೆ.

ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಅವರು ಸುರತ್ಕಲ್, ಧರ್ಮಸ್ಥಳ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಹತ್ತನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಪಿ.ದಯಾನಂದ ಪೈ ಮತ್ತು ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ 2018–2019ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ. ಸುಂದರ್‌ ರಾವ್‌ ಅವರು, ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಗುರುವಾರ ನೆರವೇರಲಿದೆ.

About The Author

Leave a Reply

Your email address will not be published. Required fields are marked *

You cannot copy content of this page.