ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರದಲ್ಲಿ ಮೋದಿ ಕುಟುಂಬದ ಸದಸ್ಯರೆಲ್ಲರೂ ಭಾಗಿಯಾಗಿದ್ದಾರೆ. ಮೋದಿ ಸಹೋದರರು ಹೀರಾಬೆನ್ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ಮೋದಿ ತಾಯಿಯ ಅಗಲಿಕೆ ಸುದ್ದಿ ತಿಳಿಯುತಿದ್ದಂತೆಯೇ ಪ್ರಧಾನಿ ಅಹಮದಾಬಾದ್‌ಗೆ ತೆರಳಿದ್ದರು. ಹೀರಾಬೆನ್ ಅಂತ್ಯಕ್ರಿಯೆಗೂ ಮುನ್ನ ಪ್ರಧಾನಿ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಹೆಗಲು ಕೊಟ್ಟಿದ್ದಾರೆ.
ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥಿವ ಶರೀರ ಅಂತಿಮ ಯಾತ್ರೆ ಹೊರಡಲಾಗಿತ್ತು. ಇಂದು ಬೆಳಗ್ಗೆ 9:30ರ ವೇಳೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆದಿದೆ. ಹೀರಾಬೆನ್ ಚಿತೆಗೆ ಮೋದಿ ಸಹೋದರರು ಅಗ್ನಿಸ್ಪರ್ಶ ಮಾಡಿದ್ದಾರೆ.