ಆಂಧ್ರಪ್ರದೇಶ; ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ.
ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ವಿಡಿಯೋ ವೈರಲ್ ಬೆನ್ನಲ್ಲೇ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಇಬ್ಬರನ್ನು ಗಾಜುವಾಕಾ ಬಳಿಯ ವೆಂಪಲಿನಗರ ಮತ್ತು ಸಮತಾನಗರದ ನಿವಾಸಿಗಳು ಎಂದು ಪೊಲೀಸರು ಹೇಳಿದ್ದಾರೆ.