ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ : ಫೆ. 6 ರಂದು ಬೆಂಗಳೂರು, ತುಮಕೂರಿನ ಸಮಾವೇಶದಲ್ಲಿ ಭಾಗಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕಕ್ಕೆ ಇದು ಅವರ ಮೂರನೇ ಭೇಟಿಯಾಗಿದೆ.

ಫೆಬ್ರವರಿ 6 ರಂದು ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮೋದಿ ಅವರು ಇಂಡಿಯಾ ಎನರ್ಜಿ ವೀಕ್ ಅನ್ನು ಉದ್ಘಾಟಿಸಲಿದ್ದಾರೆ.

ನಂತರ ತುಮಕೂರಿನ ಗುಬ್ಬಿ ತಾಲ್ಲೂಕಿನ ಬಿದರಹಳ್ಳಿ ಕಾವಲ್ ಗೆ ತೆರಳಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ಉದ್ಘಾಟಿಸಲಿದ್ದು, ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ ಜೀವನ್ ಮಿಷನ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Check Also

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು- 144 ಸೆಕ್ಷನ್‌ ಜಾರಿ..!

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು …

Leave a Reply

Your email address will not be published. Required fields are marked *

You cannot copy content of this page.