ಗುಜರಾತ್: ಬಸ್ ಹಾಗೂ ಕಾರಿನ ನಡುವಿನ ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನ ನವ್ಸಾರಿ ಜಿಲ್ಲೆಯ ಹೆದ್ದಾರಿಯಲ್ಲಿ ಶುಕ್ರವಾರ (ಡಿ.30) ರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಬಸ್ಸಿನಲ್ಲಿದ್ದವರು ಸೂರತ್ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್ ಆಗುತ್ತಿದ್ದರು.
ಈ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಎಸ್ ಯುವಿ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣವಾಗಿ ರಭಸದಿಂದ ಮುನ್ನುಗಿದೆ. ಪರಿಣಾಮ ಕಾರಿನಲ್ಲಿದ್ದವರು ಎಲ್ಲರೂ ಸಾವನ್ನಪ್ಪಿದ್ದು, ಘಟನೆಯಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
28 ಮಂದಿಗೆ ಗಾಯಗಳಾಗಿದ್ದು, ಇದರಲ್ಲಿ 11 ಮಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹೃದಯಾಘಾತವಾದ ಬಳಿಕ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಕಾರಿನಲ್ಲಿದ್ದವರು ಗುಜರಾತ್ ನ ಆಂಗಲೇಶ್ವರ ಪ್ರದೇಶದ ನಿವಾಸಿಗಳು. ವಿರುದ್ಧ ಧಿಕ್ಕಿನಿಂದ ಬರುತ್ತಿದ್ದರು. ಅಪಘಾತದ ಬಳಿಕ ಬಸ್ ಹಾಗೂ ಕಾರನ್ನು ಕ್ರೇನ್ ಮೂಲಕ ತೆರೆವು ಮಾಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.