ಹುಬ್ಬಳ್ಳಿ:ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಯುವಕನೋರ್ವ ಸ್ಮಶಾನದಲ್ಲಿ ಬೆಂಕಿ ಹಚ್ಚಿಕೊಂಡ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಕೊರಡಿ(30) ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದ್ದಾನೆ.
ವಯಸ್ಸು ಕಳೆದರೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂದು ಹಲವು ದಿನಗಳಿಂದ ಮಾನಸಿಕವಾಗಿ ಸಂತೋಷ್ ಕುಗ್ಗಿ ಹೋಗಿದ್ದ ಎನ್ನಲಾಗಿದೆ. ಇದರಿಂದಾಗಿ ಸ್ಮಶಾನದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಿಂದ ಸಂತೋಷ್ ಗೆ ಶೇ. 50ರಷ್ಟು ಸುಟ್ಟ ಗಾಯಗಳಾಗಿದೆ ಎಂದು ವರದಿ ತಿಳಿಸಿದೆ.