



ನವದೆಹಲಿ, ಜೂನ್ 03: ಒಡಿಶಾದ ಬಾಲಸೋರ್‌ನಲ್ಲಿ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಮೋದಿ ಕಟಕ್‌ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಲಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.ಕ್ಯಾಬಿನೆಟ್ ಸಹೋದ್ಯೋಗಿಗಳಾದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮೋದಿ ಅವರು ಸ್ಥಳವನ್ನು ಪರಿಶೀಲಿಸಿದರು.


ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ವಿಕ್ಷೀಸಿದರು.