

ಮುಂಬೈ ನಲ್ಲಿ ಸೋಮವಾರ ಭಾರಿ ಮಳೆಯಾದ ಹಿನ್ನೆಲೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಿತು.
ಇತ್ತೀಚಿನ ಮಾಹಿತಿಯ ಪ್ರಕಾರ, ಮುಂಬೈ ನಿಂದ ಹಾರಾಟ ನಡೆಸಬೇಕಾಗಿದ್ದ ಕನಿಷ್ಠ 50 ವಿಮಾನಗಳನ್ನು ರದ್ದುಪಡಿಸಲಾಗಿದೆ ಹಾಗೂ ಅಹಮದಾಬಾದ್, ಹೈದರಾಬಾದ್ ಮತ್ತು ಇಂದೋರ್ ಸೇರಿದಂತೆ ಹಲವಾರು ಸ್ಥಳಗಳಿಗೆ ತಿರುಗಿಸಲಾಗಿದೆ.
ಬೇರೆಡೆಗೆ ತಿರುಗಿಸಿದ ವಿಮಾನಗಳಿಗೆ ಸ್ಥಳಾವಕಾಶ ಕಲ್ಪಿಸಲು ತತ್ಪರಿಣಾಮದ ಬದಲಾವಣೆಗಳನ್ನು ಮಾಡಲಾಗಿದೆ, ಇದು ನಿರ್ಗಮನ ವಿಳಂಬಕ್ಕೆ ಕಾರಣವಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಿಎಸ್‌ಎಂಐಎ) ಪ್ರಯಾಣಿಕರಿಗೆ ಸಲಹೆ ನೀಡಿದ್ದು, ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸ್ವಲ್ಪ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಹೊರಡಲು ಸಲಹೆ ನೀಡಿದೆ.
#ImportantUpdate: Flights to and from Mumbai are getting affected due to heavy rains. Guests are advised to start early for the airport, as slow traffic and waterlogging may delay movement.
Please check flight status before heading to the airport by clicking here:…
— Air India (@airindia) July 8, 2024