July 2, 2025
thmb-2025-06-12T152734.215

ಗುಜರಾತ್ ಜೂನ್ 12:  242 ಪ್ರಯಾಣಿಕರಿದ್ದ ಎರ್ ಇಂಡಿಯಾ ವಿಮಾನ ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದೆ.

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್​ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ​ ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಏರ್ ಇಂಡಿಯಾ ವಿಮಾನ 171, ಬೋಯಿಂಗ್ 787 ಡ್ರೀಮ್‌ಲೈನರ್, ರನ್‌ವೇಯಿಂದ ಹೊರಬಂದ ಕೆಲವೇ ನಿಮಿಷಗಳ ನಂತರ ನಗರದ ಮೇಘಾನಿ ಪ್ರದೇಶದಲ್ಲಿ ಅಪಘಾತಕ್ಕೆ ಈಡಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ಆಘಾತಕಾರಿ ಚಿತ್ರಗಳು ಮಧ್ಯಾಹ್ನದ ವೇಳೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತದ ಸ್ಥಳದಿಂದ ಹೊರಹೊಮ್ಮುತ್ತಿರುವ ದೊಡ್ಡ ಹೊಗೆಯನ್ನು ತೋರಿಸಿವೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ. ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್​​ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು. ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ. ಟಿಕೆಟ್ ಮಾಹಿತಿ ಕೂಡ ಈಗ ಲಭ್ಯವಾಗಿದೆ

About The Author

Leave a Reply

Your email address will not be published. Required fields are marked *

<p>You cannot copy content of this page.</p>